Luke 24:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರಲ್ಲಿ ಕ್ಲೆಯೋಫನೆಂಬುವನು, “ಇತ್ತೀಚೆಗೆ ಜೆರುಸಲೇಮಿನಲ್ಲಿ ನಡೆದ ಸಂಗತಿಯನ್ನು ತಿಳಿಯದಿರುವ ವ್ಯಕ್ತಿ ಎಂದರೆ ನೀನೊಬ್ಬನೇ ಇರಬೇಕು” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಕ್ಲೆಯೋಫನೆಂಬವನು ಆತನಿಗೆ, “ಯೆರೂಸಲೇಮಿಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿನಗಳಲ್ಲಿ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ?” ಎಂದು ಕೇಳಲು,
Kannada BSI Bible 2016
ಆಗ ಅವರಲ್ಲಿ ಕ್ಲಿಯೊಫಾಸ್ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಕ್ಲೆಯೊಫನೆಂಬವನು ಆತನನ್ನು ಯೆರೂಸಲೇವಿುಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿವಸಗಳಲ್ಲಿ ಅದರೊಳಗೆ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ ಎಂದು ಕೇಳಲು
Kannada Bible (KNCL) BSI 2016
ಆಗ ಅವರಲ್ಲಿ ಒಬ್ಬನಾದ ಕ್ಲೆಯೋಫ, “ಇತ್ತೀಚೆಗೆ ಜೆರುಸಲೇಮಿನಲ್ಲಿ ಜರುಗಿದ ಘಟನೆಗಳನ್ನು ಪಟ್ಟಣಕ್ಕೆ ಪಟ್ಟಣವೇ ತಿಳಿದಿದೆ; ನಿನಗೊಬ್ಬನಿಗೇ ಅವು ತಿಳಿಯದೆ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರಲ್ಲಿ ಒಬ್ಬನಾದ, ಕ್ಲೆಯೊಫ ಎಂಬುವನು ಯೇಸುವಿಗೆ, “ಇತ್ತೀಚೆಗೆ ಯೆರೂಸಲೇಮಿನೊಳಗೆ ನಡೆದಿರುವ ಘಟನೆಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನೇ ಆಗಿದ್ದೀಯಾ?” ಎಂದು ಕೇಳಿದನು.