Luke 24:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವರಿಗೆ, “ನೀವು ಯಾವುದರ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರು ಆತನಿಗೆ, “ನಜರೇತಿನ ಯೇಸುವಿನ ಬಗ್ಗೆ. ಆತನು ದೇವರ ಮತ್ತು ಮನುಷ್ಯರ ದೃಷ್ಟಿಯಲ್ಲಿ ಮಹಾಪ್ರವಾದಿಯಾಗಿದ್ದನು. ಆತನು ಅನೇಕ ಸಂಗತಿಗಳನ್ನು ಹೇಳಿದನು ಮತ್ತು ಅದ್ಭುತಕಾರ್ಯಗಳನ್ನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು.
Kannada BSI Bible 2016
ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರನ್ನು - ಯಾವ ಸಂಗತಿಗಳು ಎಂದು ಕೇಳಿದನು. ಅದಕ್ಕೆ ಅವರು - ನಜರೇತಿನವನಾದ ಯೇಸುವಿನ ಸಂಗತಿಗಳೇ; ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಸಮರ್ಥನಾದ ಪ್ರವಾದಿಯಾಗಿದ್ದನು.
Kannada Bible (KNCL) BSI 2016
“ಏನು ನಡೆಯಿತು?” ಎಂದು ಯೇಸು ಪುನಃ ಕೇಳಿದಾಗ ಆ ಶಿಷ್ಯರಿಬ್ಬರು, “ಇವು ನಜರೇತಿನ ಯೇಸುವಿಗೆ ಸಂಭವಿಸಿದ ಘಟನೆಗಳು. ಅವರು ನಡೆಯಲ್ಲೂ ನುಡಿಯಲ್ಲೂ ದೇವರ ಹಾಗೂ ಸಕಲ ಮಾನವರ ದೃಷ್ಟಿಯಲ್ಲಿ ಪ್ರವಾದಿಯಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು ಅವರಿಗೆ, “ಯಾವ ಘಟನೆ?” ಎಂದು ಕೇಳಲು, ಅವರು ಯೇಸುವಿಗೆ, “ನಜರೇತಿನ ಯೇಸುವಿನ ವಿಷಯಗಳೇ, ಅವರು ಕೃತ್ಯಗಳಲ್ಲಿಯೂ ಮಾತುಗಳಲ್ಲಿಯೂ ದೇವರ ದೃಷ್ಟಿಯಲ್ಲಿಯೂ ಜನರೆಲ್ಲರ ದೃಷ್ಟಿಯಲ್ಲಿಯೂ ಬಹುಶಕ್ತಿವಂತರಾಗಿದ್ದ ಪ್ರವಾದಿಯಾಗಿದ್ದರು.