Luke 24:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವೇ ಇಸ್ರೇಲ್ ಜನರನ್ನು (ಯೆಹೂದ್ಯರನ್ನು) ಬಿಡಿಸುತ್ತಾನೆಂದು ನಾವು ನಿರೀಕ್ಷಿಸಿಕೊಂಡಿದ್ದೆವು. ಆದರೆ ಇದೆಲ್ಲಾ ನಡೆದುಹೋಯಿತು. “ಈಗ ಮತ್ತೊಂದು ಸಂಗತಿಯಾಗಿದೆ. ಈಗಾಗಲೇ ಆತನು ಸತ್ತು ಮೂರು ದಿನಗಳಾದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಇಂದಿಗೆ ಮೂರನೆಯ ದಿನ.
Kannada BSI Bible 2016
ಆದರೆ ಇಸ್ರಾಯೇಲ್ಯರನ್ನು ವಿಮೋಚಿಸುವಾತನು ಆತನೇ ಎಂದು ನಾವು ನಂಬಿದ್ದೆವು; ಇದಲ್ಲದೆ ಈ ವಿಷಯಗಳು ನಡೆದು ಇದು ಮೂರನೆಯ ದಿನವಾಗಿದೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಈ ಹೊತ್ತು ಮೂರನೆಯ ದಿನ;
Kannada Bible (KNCL) BSI 2016
ಇಸ್ರಯೇಲನ್ನು ಬಿಡುಗಡೆಮಾಡುವ ಉದ್ಧಾರಕ ಅವರೇ ಎಂದು ನಾವು ನಂಬಿಕೊಂಡಿದ್ದೆವು. ಇಷ್ಟುಮಾತ್ರವಲ್ಲ, ಇದೆಲ್ಲಾ ಸಂಭವಿಸಿ ಇಂದಿಗೆ ಮೂರು ದಿನಗಳು ಆಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಇಸ್ರಾಯೇಲರನ್ನು ವಿಮೋಚಿಸುವವರು ಆ ಯೇಸುವೇ ಎಂದು ನಾವು ನಂಬಿಕೊಂಡಿದ್ದೆವು. ಇದಲ್ಲದೆ ಈ ಘಟನೆಗಳು ನಡೆದು ಇದು ಮೂರನೆಯ ದಿನವಾಗಿದೆ.