Luke 24:23 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಅವರು ಆತನ ದೇಹವನ್ನು ಅಲ್ಲಿ ಕಾಣಲಿಲ್ಲ. ಆ ಸ್ತ್ರೀಯರು ಹಿಂತಿರುಗಿ ಬಂದು ತಮಗೆ ದೇವದೂತರಿಬ್ಬರ ದರ್ಶನವಾಯಿತೆಂದೂ ಯೇಸು ಬದುಕಿದ್ದಾನೆಂದೂ ತಮಗೆ ಇದನ್ನು ದೇವದೂತರೇ ತಿಳಿಸಿದರೆಂದೂ ನಮಗೆ ಹೇಳಿದರು.
Kannada BSI Bible 2016
ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ದೇಹವನ್ನು ಕಾಣದೆ ಅಲ್ಲಿಂದ ಬಂದು ತಮಗೆ ದೇವದೂತರ ದರ್ಶನವಾಯಿತೆಂತಲೂ ಆತನು ಬದುಕುತ್ತಾನೆಂದು ಅವರು ಹೇಳಿದರೆಂತಲೂ ತಿಳಿಸಿ ನಮಗೆ ಅತ್ಯಾಶ್ಚರ್ಯವನ್ನುಂಟುಮಾಡಿದರು.
Kannada Bible (KNCL) BSI 2016
ಅಲ್ಲಿ ಯೇಸುವಿನ ಪಾರ್ಥಿವ ಶರೀರವನ್ನು ಕಾಣಲಿಲ್ಲ. ಹಿಂದಿರುಗಿ ಬಂದು, ‘ನಮಗೆ ದೇವದೂತರು ಪ್ರತ್ಯಕ್ಷರಾದರು; ಇವರು ಯೇಸುಸ್ವಾಮಿ ಸಜೀವದಿಂದ ಇದ್ದಾರೆಂದು ನಮಗೆ ತಿಳಿಸಿದರು,’ ಎಂದು ಹೇಳಿ ನಮ್ಮನ್ನು ದಿಗ್ಭ್ರಾಂತರನ್ನಾಗಿ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಅವರು ಯೇಸುವಿನ ದೇಹವನ್ನು ಕಾಣದೆ ಬಂದು, ಯೇಸು ಜೀವದಿಂದ ಎದ್ದಿದ್ದಾರೆ, ಎಂದು ಹೇಳಿದ ದೇವದೂತರನ್ನೂ ಕಂಡಿದ್ದ ದೃಶ್ಯವನ್ನೂ ನಮಗೆ ಹೇಳಿದರು.