Luke 24:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಅವರು ಆತನಿಗೆ, “ಈಗ ಹೊತ್ತಾಯಿತು, ರಾತ್ರಿಯಾಗುತ್ತಾ ಬಂದಿದೆ. ನಮ್ಮೊಂದಿಗೆ ಇರು” ಎಂದು ಬೇಡಿಕೊಂಡರು. ಆದ್ದರಿಂದ ಆತನು ಅವರೊಂದಿಗಿರಲು ಊರೊಳಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವರು, “ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು” ಎಂದು ಆತನಿಗೆ ಹೇಳಿ ಬಲವಂತ ಮಾಡಲು, ಆತನು ಅವರ ಕೂಡ ಇರುವುದಕ್ಕೆ ಹೋದನು.
Kannada BSI Bible 2016
ಆದರೆ ಅವರು ಆತನಿಗೆ--ನಮ್ಮೊಂದಿಗೆ ಇರು; ಯಾಕಂದರೆ ಈಗ ಸಾಯಂಕಾಲ ವಾಗುತ್ತಾ ಇದೆ ಮತ್ತು ಹಗಲು ಬಹಳ ಮಟ್ಟಿಗೆ ಕಳೆಯಿತು ಎಂದು ಹೇಳಿ ಆತನನ್ನು ಬಲವಂತ ಮಾಡಿ ದರು. ಆಗ ಆತನು ಅವರೊಂದಿಗೆ ಇರುವದಕ್ಕಾಗಿ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವರು - ನಮ್ಮ ಸಂಗಡ ಇರು, ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂತು ಎಂದು ಆತನಿಗೆ ಹೇಳಿ ಬಲವಂತಮಾಡಲು ಆತನು ಅವರ ಕೂಡ ಇರುವದಕ್ಕೆ ಊರೊಳಕ್ಕೆ ಹೋದನು.
Kannada Bible (KNCL) BSI 2016
ಆಗ ಶಿಷ್ಯರು, “ಸಂಜೆಯಾಯಿತು, ಕತ್ತಲಾಗುತ್ತ ಬಂದಿತು; ಬಂದು ನಮ್ಮೊಡನೆ ತಂಗಿರಿ,” ಎಂದು ಒತ್ತಾಯಪಡಿಸಿದರು. ಯೇಸು ಅವರೊಡನೆ ತಂಗಲು ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ಯೇಸುವಿಗೆ, “ನಮ್ಮೊಂದಿಗೆ ಇರು, ಈಗ ಸಂಜೆಯಾಯಿತು. ಕತ್ತಲಾಯಿತು,” ಎಂದು ಹೇಳಿ, ಆತನನ್ನು ಬಲವಂತ ಮಾಡಿದರು. ಆಗ ಯೇಸು ಅವರೊಂದಿಗೆ ಇರುವುದಕ್ಕಾಗಿ ಹೋದರು.