Luke 24:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರಿಬ್ಬರು, “ಯೇಸು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗ ನಮ್ಮಲ್ಲಿ ಬೆಂಕಿ ಉರಿದಂತಾಯಿತಲ್ಲವೇ? ಪವಿತ್ರ ಗ್ರಂಥದ ನಿಜ ಅರ್ಥವನ್ನು ಆತನು ವಿವರಿಸಿದಾಗ, ಬಹಳ ರೋಮಾಂಚಕಾರಿಯಾಗಿರಲಿಲ್ಲವೇ?” ಎಂದು ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು,
Kannada BSI Bible 2016
ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರು ಒಬ್ಬರಿಗೊಬ್ಬರು - ಆತನು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗಲೂ ಗ್ರಂಥಗಳ ಅರ್ಥವನ್ನು ನಮಗೆ ಬಿಚ್ಚಿ ಹೇಳಿದಾಗಲೂ ನಮ್ಮ ಹೃದಯವು ನಮ್ಮಲ್ಲಿ ಕುದಿಯಿತಲ್ಲವೇ ಎಂದು ಹೇಳಿಕೊಂಡು
Kannada Bible (KNCL) BSI 2016
ಶಿಷ್ಯರು ಒಬ್ಬರಿಗೊಬ್ಚರು ಮಾತನಾಡಿಕೊಳ್ಳುತ್ತಾ, “ದಾರಿಯಲ್ಲಿ ಇವರು ನಮ್ಮ ಸಂಗಡ ಮಾತನಾಡುತ್ತಾ ಪವಿತ್ರಗ್ರಂಥದ ಅರ್ಥವನ್ನು ನಮಗೆ ವಿವರಿಸುತ್ತಾ ಇದ್ದಾಗ ನಮ್ಮ ಹೃದಯ ಕುತೂಹಲದಿಂದ ಕುದಿಯುತ್ತಾ ಇತ್ತಲ್ಲವೆ?” ಎಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಒಬ್ಬರಿಗೊಬ್ಬರು, “ಅವರು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ, ಪವಿತ್ರ ವೇದವನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ಬೆಂಕಿಯಂತೆ ದಹಿಸಿತಲ್ಲವೇ?” ಎಂದುಕೊಂಡರು.