Luke 24:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಕೂಡಲೇ ಅವರಿಬ್ಬರೂ ಎದ್ದು ಜೆರುಸಲೇಮಿಗೆ ಹಿಂತಿರುಗಿ ಹೋದರು. ಜೆರುಲೇಮಿನಲ್ಲಿ ಯೇಸುವಿನ ಶಿಷ್ಯರು ಒಟ್ಟಾಗಿ ಸೇರಿಬಂದಿದ್ದರು. ಹನ್ನೊಂದು ಮಂದಿ ಅಪೊಸ್ತಲರು ಮತ್ತು ಅವರ ಸಂಗಡ ಇದ್ದ ಆ ಜನರು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇಮಿಗೆ ಹಿಂತಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡ ಇದ್ದವರೂ ಒಟ್ಟಾಗಿ ಕೂಡಿಕೊಂಡಿದ್ದರು.
Kannada BSI Bible 2016
ಅವರು ಅದೇ ಗಳಿಗೆಯಲ್ಲಿ ಯೆರೂಸಲೇಮಿಗೆ ಹಿಂದಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿ ಕೊಂಡಿರುವದನ್ನು ಅವರು ಕಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇವಿುಗೆ ಹಿಂತಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡ ಇದ್ದವರೂ ಒಟ್ಟಾಗಿ ಕೂಡಿಕೊಂಡಿದ್ದು -
Kannada Bible (KNCL) BSI 2016
ಒಡನೇ ಅವರು ಅಲ್ಲಿಂದ ಎದ್ದು ಜೆರುಸಲೇಮಿಗೆ ಹಿಂದಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡಿಗರೂ ಒಟ್ಟುಗೂಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಇಬ್ಬರು ಶಿಷ್ಯರು ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇಮಿಗೆ ಹಿಂದಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿಕೊಂಡಿರುವುದನ್ನು ಕಂಡರು.