Luke 24:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರಿಬ್ಬರೂ ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಯೇಸುವು ಶಿಷ್ಯರ ಗುಂಪಿನ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ನಿಮಗೆ ಶಾಂತಿಯಾಗಲಿ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಈ ಸಂಗತಿಗಳನ್ನು ಕುರಿತು ಮಾತನಾಡುತ್ತಿರುವಾಗ ಯೇಸುವೇ ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದು ಅವರಿಗೆ ಹೇಳಿದನು.
Kannada BSI Bible 2016
ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಈ ಸಂಗತಿಯನ್ನು ಕುರಿತು ಮಾತಾಡುತ್ತಿರುವಾಗ ಆತನೇ ಅವರ ನಡುವೆ ನಿಂತು [- ನಿಮಗೆ ಮನಶ್ಶಾಂತಿಯಾಗಲಿ ಎಂದು ಅವರಿಗೆ ಹೇಳಿದನು].
Kannada Bible (KNCL) BSI 2016
ಅವರು ವರದಿಮಾಡುತ್ತಿದ್ದಂತೆ ಯೇಸುಸ್ವಾಮಿಯೇ ಅವರ ಮಧ್ಯೆ ಪ್ರತ್ಯಕ್ಷವಾಗಿ ನಿಂತು, ‘ನಿಮಗೆ ಶಾಂತಿ,’ ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರೆಲ್ಲರೂ ಹೀಗೆ ಮಾತನಾಡುತ್ತಿರುವಾಗ, ಯೇಸು ತಾವೇ ಅವರ ನಡುವೆ ನಿಂತು ಅವರಿಗೆ, “ನಿಮಗೆ ಸಮಾಧಾನವಾಗಲಿ,” ಎಂದರು.