Luke 24:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಕೈಗಳನ್ನು ಮತ್ತು ಪಾದಗಳನ್ನು ನೋಡಿರಿ. ನಾನೇ ಅಲ್ಲವೇ! ನನ್ನನ್ನು ಮುಟ್ಟಿರಿ. ನನ್ನ ಈ ಜೀವಂತ ದೇಹವನ್ನು ನೀವೇ ನೋಡಿರಿ. ಭೂತಕ್ಕೆ ಈ ರೀತಿಯ ದೇಹವಿರುವುದಿಲ್ಲ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ. ನಾನೇ ಅಲ್ಲವೇ, ನನ್ನನ್ನು ಮುಟ್ಟಿ ನೋಡಿರಿ. ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು. ಅವು ಭೂತಕ್ಕಿಲ್ಲ” ಎಂದು ಹೇಳಿದನು.
Kannada BSI Bible 2016
ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನು ಮುಟ್ಟಿನೋಡಿರಿ, ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು; ಅವು ಭೂತಕ್ಕಿಲ್ಲ ಎಂದು ಹೇಳಿದನು.
Kannada Bible (KNCL) BSI 2016
ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿ, ನಾನೇ ಅಲ್ಲವೇ? ನನ್ನನ್ನು ಮುಟ್ಟಿ ನೋಡಿರಿ, ನೀವು ನನ್ನಲ್ಲಿ ಕಾಣುವಂತೆ, ಮಾಂಸ ಮತ್ತು ಎಲುಬು ಭೂತಕ್ಕೆ ಇರುವುದಿಲ್ಲ,” ಎಂದರು. (
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ. ನಾನೇ ಆತನು! ನನ್ನನ್ನು ಮುಟ್ಟಿ ನೋಡಿರಿ; ನೀವು ಕಾಣುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ,” ಎಂದರು.