Luke 24:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶಿಷ್ಯರು ಅತ್ಯಾಶ್ಚರ್ಯಗೊಂಡರು ಮತ್ತು ಯೇಸುವನ್ನು ಜೀವಂತವಾಗಿ ಕಂಡು ಅತ್ಯಂತ ಸಂತೋಷಪಟ್ಟರು. ಆದರೆ ಅವರಿಗಿನ್ನೂ ನಂಬಲಾಗಲಿಲ್ಲ. ಯೇಸು ಅವರಿಗೆ, “ನಿಮ್ಮಲ್ಲಿ ಆಹಾರವೇನಾದರೂ ಇದೆಯೋ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವರು ಸಂತೋಷಭರಿತರಾಗಿ ಇನ್ನೂ ನಂಬದೇ ಆಶ್ಚರ್ಯಪಡುತ್ತಿರಲಾಗಿ ಆತನು, “ತಿನ್ನತಕ್ಕ ಪದಾರ್ಥವೇನಾದರೂ ನಿಮ್ಮಲ್ಲುಂಟೋ?” ಎಂದು ಅವರನ್ನು ಕೇಳಲು,
Kannada BSI Bible 2016
ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವರು ಸಂತೋಷದ ದೆಸೆಯಿಂದ ಇನ್ನೂ ನಂಬದೆ ಆಶ್ಚರ್ಯಪಡುತ್ತಿರಲಾಗಿ ಆತನು - ತಿನ್ನತಕ್ಕ ಪದಾರ್ಥವೇನಾದರೂ ಇಲ್ಲಿ ನಿಮಗುಂಟೋ ಎಂದು ಅವರನ್ನು ಕೇಳಲು
Kannada Bible (KNCL) BSI 2016
ಶಿಷ್ಯರು ಇನ್ನೂ ನಂಬದೆ, ಆನಂದಾಶ್ಚರ್ಯಭರಿತರಾಗಿದ್ದರು. ಆಗ ಯೇಸು, “ನಿಮ್ಮಲ್ಲಿ ತಿನ್ನಲು ಏನಾದರೂ ಇದೆಯೇ?’ ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರುವಾಗ ಯೇಸು ಅವರಿಗೆ, “ನಿಮ್ಮಲ್ಲಿ ಆಹಾರವೇನಾದರೂ ಇದೆಯೋ?” ಎಂದು ಕೇಳಿದರು.