Luke 24:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.
Kannada BSI Bible 2016
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಆತನು - ನಾನು ಇನ್ನೂ ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವದೆಲ್ಲಾ ನೆರವೇರುವದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ ಅಂದನು.
Kannada Bible (KNCL) BSI 2016
ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.