Luke 24:47 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು. (Verses 47-48)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.
Kannada BSI Bible 2016
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.
Kannada Bible (KNCL) BSI 2016
ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.