Luke 24:49 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೇಳಿರಿ! ನನ್ನ ತಂದೆ ನಿಮಗೆ ವಾಗ್ದಾನ ಮಾಡಿದ್ದನ್ನು ನಾನು ನಿಮಗೆ ಕಳುಹಿಸಿಕೊಡುತ್ತೇನೆ. ಆದರೆ ನೀವು ಪರಲೋಕದಿಂದ ಆ ಶಕ್ತಿಯನ್ನು ಪಡೆಯುವ ತನಕ ಜೆರುಸಲೇಮಿನಲ್ಲೇ ಕಾದುಕೊಂಡಿರಿ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ” ಎಂದು ಹೇಳಿದನು.
Kannada BSI Bible 2016
ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್‌ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ ನನ್ನ ತಂದೆಯು ವಾಗ್ದಾನಮಾಡಿದ್ದನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಹೊದಿಸುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರ್ರಿ ಎಂದು ಹೇಳಿದನು.
Kannada Bible (KNCL) BSI 2016
ನನ್ನ ಪಿತ ವಾಗ್ದಾನ ಮಾಡಿದ ವ್ಯಕ್ತಿಯನ್ನು ನಾನೇ ನಿಮಗೆ ಕಳುಹಿಸಿಕೊಡುವೆನು. ಸ್ವರ್ಗದಿಂದ ಬರುವ ಶಕ್ತಿಯಿಂದ ನೀವು ಭೂಷಿತರಾಗುವ ತನಕ ಈ ಪಟ್ಟಣದಲ್ಲೇ ಕಾದಿರಿ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮಗೆ ಕಳುಹಿಸುವೆನು; ಆದರೆ ನೀವು ಪರಲೋಕದ ಶಕ್ತಿಯನ್ನು ಹೊದಿಸುವ ತನಕ, ಈ ಪಟ್ಟಣದಲ್ಲಿಯೇ ಕಾದುಕೊಂಡಿರಿ,” ಎಂದರು.