Luke 24:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸ್ತ್ರೀಯರು ಬಹಳವಾಗಿ ಹೆದರಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬಗ್ಗಿಸಿಕೊಂಡು ನಿಂತರು. ಆ ಮನುಷ್ಯರು, “ಬದುಕಿರುವ ವ್ಯಕ್ತಿಯನ್ನು ಇಲ್ಲಿ ಹುಡುಕುವುದೇಕೆ? ಇದು ಸತ್ತ ಜನರನ್ನು ಇಡುವ ಸ್ಥಳ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು?
Kannada BSI Bible 2016
ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸ್ತ್ರೀಯರು ಭಯ ಹಿಡಿದವರಾಗಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿರುವಾಗ ಆ ಪುರುಷರು ಅವರಿಗೆ - ಸತ್ತವರೊಳಗೆ ಬದುಕಿರುವವನನ್ನು ಹುಡುಕುವದೇನು? ಆತನು ಇಲ್ಲಿ ಇಲ್ಲ, ಎದ್ದಿದ್ದಾನೆ.
Kannada Bible (KNCL) BSI 2016
ಮಹಿಳೆಯರು ಭಯಭ್ರಾಂತರಾದರು. ಅವರ ದೃಷ್ಟಿ ನೆಲನಾಟಿತು. ಆಗ ಆ ವ್ಯಕ್ತಿಗಳು, “ಸಜೀವವಾಗಿರುವವರನ್ನು ಸತ್ತವರ ಮಧ್ಯೆ ಹುಡುಕುವುದೇನು? ಅವರು ಇಲ್ಲಿಲ್ಲ; ಪುನರುತ್ಥಾನ ಹೊಂದಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸ್ತ್ರೀಯರು ಭಯಪಟ್ಟು ತಮ್ಮ ದೃಷ್ಟಿಯನ್ನು ನೆಲದ ಕಡೆಗೆ ನಾಟಿರಲು, ಆ ಪುರುಷರು ಅವರಿಗೆ, “ಜೀವಿಸುವವರನ್ನು ಸತ್ತವರೊಳಗೆ ನೀವು ಏಕೆ ಹುಡುಕುತ್ತೀರಿ?