Luke 3:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಹಾನನು, “ನಿಮ್ಮಲ್ಲಿ ಎರಡು ಅಂಗಿಗಳಿದ್ದರೆ, ಏನೂ ಇಲ್ಲದವನಿಗೆ ಒಂದು ಕೊಡಿರಿ. ನಿಮ್ಮಲ್ಲಿ ಆಹಾರವಿದ್ದರೆ, ಅದನ್ನೂ ಹಂಚಿಕೊಡಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು, “ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ” ಎಂದು ಅವರಿಗೆ ಹೇಳಿದನು.
Kannada BSI Bible 2016
ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ ಎಂದು ಅವರಿಗೆ ಹೇಳಿದನು.
Kannada Bible (KNCL) BSI 2016
“ನಿಮಗೆ ಎರಡು ಅಂಗಿಗಳಿದ್ದರೆ, ಒಂದನ್ನು ಏನೂ ಇಲ್ಲದವನಿಗೆ ಕೊಡಿ; ಅಂತೆಯೇ ಆಹಾರ ಉಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೋಹಾನನು ಉತ್ತರವಾಗಿ, “ಎರಡು ಅಂಗಿಗಳಿದ್ದರೆ ಇಲ್ಲದವನಿಗೆ ಒಂದನ್ನು ಕೊಡಲಿ, ಆಹಾರವುಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಹೇಳಿದನು.