Luke 3:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೈನಿಕರು ಯೋಹಾನನಿಗೆ, “ನಾವೇನು ಮಾಡಬೇಕು?” ಎಂದು ಕೇಳಿದರು. ಯೋಹಾನನು ಅವರಿಗೆ, “ಲಂಚ ತೆಗೆದುಕೊಳ್ಳಬೇಡಿ, ಸುಳ್ಳುದೂರು ಹೇಳಬೇಡಿರಿ. ನಿಮಗೆ ಸಿಕ್ಕುವ ಸಂಬಳದಲ್ಲಿ ಸಂತೋಷವಾಗಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿಪಾಯಿಗಳು ಸಹ ಬಂದು, “ನಾವು ಏನು ಮಾಡಬೇಕು” ಎಂದು ಆತನನ್ನು ಕೇಳಿದಾಗ ಆತನು ಅವರಿಗೆ, “ಯಾರನ್ನಾದರೂ ಬೆದರಿಸಿ ದುಡ್ಡು ಕಸಿದುಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ” ಎಂದು ಹೇಳಿದನು.
Kannada BSI Bible 2016
ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿಪಾಯಿಗಳು ಸಹ ಬಂದು - ನಾವು ಏನು ಮಾಡಬೇಕು ಎಂದು ಅವನನ್ನು ಕೇಳಿದಾಗ ಅವನು ಅವರಿಗೆ - ಯಾರನ್ನಾದರೂ ಬೆದರಿಸಬೇಡಿರಿ; ಯಾರ ಮೇಲಾದರೂ ಸುಳ್ಳುದೂರು ತಂದು ದುಡ್ಡು ಕಸಕೊಳ್ಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ ಎಂದು ಹೇಳಿದನು.
Kannada Bible (KNCL) BSI 2016
“ನಾವು ಮಾಡಬೇಕಾದುದೇನು?” ಎಂದು ಸಿಪಾಯಿಗಳು ಮುಂದೆ ಬಂದು ಪ್ರಶ್ನಿಸಿದಾಗ, “ಬಲಾತ್ಕಾರದಿಂದಾಗಲಿ, ಸುಳ್ಳು ಬೆದರಿಕೆಯಿಂದಾಗಲಿ ಯಾರನ್ನೂ ಸುಲಿಗೆ ಮಾಡಬೇಡಿ; ನಿಮಗೆ ಬರುವ ಸಂಬಳದಿಂದ ತೃಪ್ತರಾಗಿರಿ,” ಎಂದು ಆತ ಉತ್ತರವಿತ್ತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರಂತೆಯೇ ಸೈನಿಕರು, “ನಾವೇನು ಮಾಡಬೇಕು?” ಎಂದು ಕೇಳಿದರು. ಅದಕ್ಕೆ ಯೋಹಾನನು, “ಯಾರನ್ನೂ ಬೆದರಿಸಿ ಹಣ ತೆಗೆದುಕೊಳ್ಳಬೇಡಿರಿ. ಯಾರ ಮೇಲೆಯೂ ಸುಳ್ಳು ದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ,” ಎಂದು ಹೇಳಿದನು.