Luke 3:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರೆಲ್ಲರೂ ಕ್ರಿಸ್ತನ ಆಗಮನವನ್ನು ನಿರೀಕ್ಷಿಸುತ್ತಿದ್ದುದರಿಂದ ಅವರು ಯೋಹಾನನ ಬಗ್ಗೆ ಆಶ್ಚರ್ಯಪಟ್ಟು, “ಒಂದುವೇಳೆ ಈತನೇ ಕ್ರಿಸ್ತನಾಗಿರಬಹುದು” ಎಂದು ಭಾವಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವಲ್ಲಿ ಇಸ್ರಾಯೇಲ್ ಜನರು ಬರಬೇಕಾದ ಕ್ರಿಸ್ತನನ್ನು ಎದುರು ನೋಡುವವರಾಗಿದ್ದದರಿಂದ ಅವರೆಲ್ಲರೂ ಯೋಹಾನನ ವಿಷಯವಾಗಿ ಇವನೇ ಆ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಮನಸ್ಸಿನಲ್ಲಿ ವಿಚಾರಮಾಡಿಕೊಳ್ಳುತ್ತಿರಲು,
Kannada BSI Bible 2016
ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವಲ್ಲಿ ಇಸ್ರಾಯೇಲ್ ಜನರು ಬರಬೇಕಾದ ಕ್ರಿಸ್ತನನ್ನು ಎದುರುನೋಡುವವರಾಗಿದ್ದದರಿಂದ ಅವರೆಲ್ಲರು ಯೋಹಾನನ ವಿಷಯವಾಗಿ - ಇವನೇ ಆ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಮನಸ್ಸಿನಲ್ಲಿ ವಿಚಾರಮಾಡಿಕೊಳ್ಳುತ್ತಿರಲು
Kannada Bible (KNCL) BSI 2016
“ಈ ಯೊವಾನ್ನನೇ ಎಲ್ಲರು ಎದುರುನೋಡುತ್ತಾ ಇರುವ ಅಭಿಷಿಕ್ತನಾದ ಲೋಕೋದ್ಧಾರಕ ಆಗಿರಬಹುದೇ” ಎಂದು ಜನರು ತಮ್ಮ ಮನಸ್ಸಿನಲ್ಲೇ ಆಲೋಚಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಜನರು ಕ್ರಿಸ್ತನಿಗಾಗಿ ಎದುರುನೋಡುತ್ತಾ ಇದ್ದದ್ದರಿಂದ, ಯೋಹಾನನೇ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.