Luke 3:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ರಾಶಿಯನ್ನು ಶುದ್ಧಮಾಡುವುದಕ್ಕೆ ಸಿದ್ಧನಾಗಿ ಬರುವನು. ಆತನು ಒಳ್ಳೆಯ ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ತನ್ನ ಕಣಜದಲ್ಲಿ ಹಾಕುವನು. ನಂತರ ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ. ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವನು. ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.
Kannada BSI Bible 2016
ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಳ್ಳುವದಕ್ಕಿದ್ದಾನೆ, ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅವರ ಕೈಯಲ್ಲಿ ಮೊರವಿದೆ. ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ, ಗಟ್ಟಿಕಾಳನ್ನು ಮಾತ್ರ ಕಣಜಕ್ಕೆ ತುಂಬುವರು. ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ನುಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣವನ್ನು ಶುದ್ಧಮಾಡಿ ಗೋಧಿಯನ್ನು ತಮ್ಮ ಕಣಜದಲ್ಲಿ ಕೂಡಿಸುವರು. ಆದರೆ ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.