Luke 3:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜ್ಯಪಾಲ ಹೆರೋದನು ತನ್ನ ಸಹೋದರನ ಹೆಂಡತಿಯಾದ ಹೆರೋದ್ಯಳೊಂದಿಗೆ ಹೊಂದಿದ್ದ ಅನೈತಿಕ ಸಂಬಂಧವನ್ನು ಮತ್ತು ಹೆರೋದನು ಮಾಡಿದ್ದ ಅನೇಕ ದುಷ್ಕೃತ್ಯಗಳನ್ನು ಯೋಹಾನನು ಖಂಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿಯೂ, ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿಮಿತ್ತವಾಗಿಯೂ ಯೋಹಾನನಿಂದ ಗದರಿಸಲ್ಪಟ್ಟಿದರಿಂದ,
Kannada BSI Bible 2016
ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿವಿುತ್ತವಾಗಿಯೂ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿವಿುತ್ತವಾಗಿಯೂ
Kannada Bible (KNCL) BSI 2016
ಸಾಮಂತ ಹೆರೋದನು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದನು. ಅಲ್ಲದೆ ತನ್ನ ಸೋದರನ ಹೆಂಡತಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಆದ್ದರಿಂದ ಯೊವಾನ್ನನು ಅವನನ್ನು ಖಂಡಿಸಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚತುರಾಧಿಪತಿಯಾದ ಹೆರೋದನು, ತನ್ನ ಸಹೋದರ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಇಟ್ಟುಕೊಂಡಿದ್ದನು ಮತ್ತು ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿ ಯೋಹಾನನು ಅವನನ್ನು ಬಹಿರಂಗವಾಗಿ ಗದರಿಸಿದ್ದರಿಂದ,