Luke 3:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನ್ನನು ಮತ್ತು ಕಾಯಫನು ಮಹಾಯಾಜಕರಾಗಿದ್ದರು. ಆ ಸಮಯದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ದೇವರಿಂದ ಆಜ್ಞೆಯೊಂದು ಬಂತು. ಯೋಹಾನನು ಗುಡ್ಡಗಾಡಿನಲ್ಲಿ ವಾಸವಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನ್ನನು ಮತ್ತು ಕಾಯಫನೂ ಮಹಾಯಾಜಕರಾಗಿದ್ದ ಕಾಲದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ಮರುಭೂಮಿಯಲ್ಲಿ ದೇವರ ವಾಕ್ಯವು ಪ್ರಕಟವಾಯಿತು.
Kannada BSI Bible 2016
ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನ್ನನೂ ಕಾಯಫನೂ ಮಹಾಯಾಜಕರಾಗಿದ್ದ ಕಾಲದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ಅಡವಿಯಲ್ಲಿ ದೇವರ ವಾಕ್ಯವುಂಟಾಯಿತು.
Kannada Bible (KNCL) BSI 2016
ಅನ್ನನು ಮತ್ತು ಕಾಯಫನು ಅಂದಿನ ಪ್ರಧಾನ ಯಾಜಕರು. ಆಗ ಬೆಂಗಾಡಿನಲ್ಲಿ ಜಕರೀಯನ ಮಗ ಯೊವಾನ್ನನಿಗೆ ದೇವರ ಸಂದೇಶದ ಬೋಧೆ ಆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನ್ನನು ಮತ್ತು ಕಾಯಫನು ಮಹಾಯಾಜಕರು ಆಗಿದ್ದ ಸಮಯದಲ್ಲಿ, ಅರಣ್ಯದಲ್ಲಿದ್ದ ಜಕರೀಯನ ಮಗ ಯೋಹಾನನಿಗೆ ದೇವರ ವಾಕ್ಯವುಂಟಾಯಿತು.