Luke 3:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಹೆರೋದನು ಯೋಹಾನನನ್ನು ಸೆರೆಮನೆಗೆ ಹಾಕಿಸಿ ತನ್ನ ದುಷ್ಕೃತ್ಯಗಳೊಂದಿಗೆ ಮತ್ತೊಂದು ದುಷ್ಕೃತ್ಯವನ್ನು ಸೇರಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಪಟ್ಟಿಯನ್ನು ಇನ್ನೂ ಹೆಚ್ಚಿಸಿಕೊಂಡನು.
Kannada BSI Bible 2016
ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಹಾನನಿಂದ ಗದರಿಸಲ್ಪಟ್ಟವನಾಗಿ ಅವನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಲೆಕ್ಕವನ್ನು ಇನ್ನೂ ಹೆಚ್ಚಿಸಿದನು.
Kannada Bible (KNCL) BSI 2016
ಹೆರೋದನು ಯೊವಾನ್ನನನ್ನು ಕಾರಾಗೃಹದಲ್ಲಿ ಬಂಧಿಸಿ, ತನ್ನ ದುಷ್ಕೃತ್ಯಗಳಿಗೆ ಮತ್ತೊಂದು ದುಷ್ಕೃತ್ಯವನ್ನು ಕೂಡಿಸಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆರೋದನು ಯೋಹಾನನನ್ನು ಸೆರೆಯಲ್ಲಿ ಬಂಧಿಸಿ, ತನ್ನ ಎಲ್ಲಾ ದುಷ್ಕೃತ್ಯಗಳೊಂದಿಗೆ ಮತ್ತೊಂದನ್ನು ಕೂಡಿಸಿದ್ದನು.