Luke 3:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಹಾನನನ್ನು ಸೆರೆಮನೆಗೆ ಹಾಕುವುದಕ್ಕಿಂತ ಮೊದಲು, ಜನರೆಲ್ಲರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. ಆಗ ಯೇಸು ಸಹ ಬಂದು ದೀಕ್ಷಾಸ್ನಾನ ಮಾಡಿಸಿಕೊಂಡನು. ಯೇಸು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು
Kannada BSI Bible 2016
ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಲ್ಲಿ ಆಕಾಶವು ತೆರೆಯಿತು;
Kannada Bible (KNCL) BSI 2016
ಜನರೆಲ್ಲರು ಸ್ನಾನದೀಕ್ಷೆ ಪಡೆಯುತ್ತಾ ಇದ್ದರು. ಯೇಸುಸ್ವಾಮಿಯೂ ಬಂದು ಸ್ನಾನದೀಕ್ಷೆಪಡೆದು ಪ್ರಾರ್ಥಿಸುತ್ತಿರಲು, ಆಕಾಶವು ತೆರೆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು, ಆಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥಿಸುತ್ತಿರುವಲ್ಲಿ, ಸ್ವರ್ಗವು ತೆರೆಯಿತು.