Luke 3:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಶಾಯ ಪ್ರವಾದಿಯು ತನ್ನ ಗ್ರಂಥದಲ್ಲಿ ಬರೆದಿರುವಂತೆಯೇ ಇದು ನಡೆಯಿತು. ಅದೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನೆಂದರೆ, “‘ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವುದು, ಡೊಂಕಾಗಿರುವಂಥದು ನೆಟ್ಟಗಾಗುವುದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದಾಗುವ ರಕ್ಷಣೆಯನ್ನು ಕಾಣುವರು’ ಎಂಬುದಾಗಿ ಮರುಭೂಮಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.
Kannada BSI Bible 2016
ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನಂದರೆ - ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಡೊಂಕಾಗಿರುವಂಥದು ನೀಟಾಗುವದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದ ಸಿದ್ಧವಾಗುವ ರಕ್ಷಣೆಯನ್ನು ಕಾಣುವರು ಎಂಬದಾಗಿ ಅಡವಿಯಲ್ಲಿ ಕೂಗುವವನ ಶಬ್ಧವದೆ ಎಂಬದೇ.
Kannada Bible (KNCL) BSI 2016
ಈ ಬಗ್ಗೆ ಪ್ರವಾದಿ ಯೆಶಾಯನ ಗ್ರಂಥದಲ್ಲಿ ಮುಂಚಿತವಾಗಿಯೇ ಹೀಗೆಂದು ಬರೆದಿಡಲಾಗಿದೆ: “ ‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ’ ಎಂದು ಬೆಂಗಾಡಿನಲ್ಲಿ ಒಬ್ಬನು ಘೋಷಿಸುತ್ತಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರ ಬಗ್ಗೆ ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಮುಂಚಿತವಾಗಿ ಹೀಗೆಂದು ಬರೆದಿದೆ: “ಅರಣ್ಯದಲ್ಲಿ ಕೂಗುವವನ ಸ್ವರವು, ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ.