Luke 3:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರಿಗೆ. “ನೀವು ವಿಷಕರವಾದ ಹಾವುಗಳಂತಿದ್ದೀರಿ! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮಗೆ ಎಚ್ಚರಿಕೆಕೊಟ್ಟವರಾರು?
Kannada BSI Bible 2016
ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಅವನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವದಕ್ಕಾಗಿ ಹೊರಟುಬಂದ ಜನರ ಗುಂಪುಗಳಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೂ ಉಪದೇಶ ಮಾಡಿದವರಾರು?
Kannada Bible (KNCL) BSI 2016
ಯೊವಾನ್ನನ ಬಳಿಗೆ ಸ್ನಾನದೀಕ್ಷೆ ಪಡೆಯಲು ಜನರು ಗುಂಪುಗುಂಪಾಗಿ ಬರುತ್ತಿದ್ದರು. ಆತನು ಅವರಿಗೆ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆಕೊಟ್ಟವರಾರು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ, ಯೋಹಾನನು, “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?