Luke 4:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ತಾನು ಬೆಳೆದ ನಜರೇತ್ ಎಂಬ ಊರಿಗೆ ಪ್ರಯಾಣ ಮಾಡಿದನು. ವಾಡಿಕೆಯ ಪ್ರಕಾರ, ಆತನು ಸಬ್ಬತ್‌ದಿನದಲ್ಲಿ ಸಭಾಮಂದಿರಕ್ಕೆ ಹೋದನು. ಯೇಸು ಓದುವುದಕ್ಕಾಗಿ ಎದ್ದುನಿಂತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು.
Kannada BSI Bible 2016
ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್‌ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ವಾಡಿಕೆಯ ಪ್ರಕಾರ ಸಬ್ಬತ್‍ದಿನದಲ್ಲಿ ಸಭಾಮಂದಿರಕ್ಕೆ ಹೋಗಿ ಓದುವದಕ್ಕಾಗಿ ಎದ್ದು ನಿಂತನು.
Kannada Bible (KNCL) BSI 2016
ಯೇಸುಸ್ವಾಮಿ ತಾವು ಬೆಳೆದ ಊರಾದ ನಜರೇತಿಗೆ ಬಂದರು. ವಾಡಿಕೆಯ ಪ್ರಕಾರ ಸಬ್ಬತ್‍ದಿನ ಪ್ರಾರ್ಥನಾಮಂದಿರಕ್ಕೆ ಹೋದರು. ಅಲ್ಲಿ ಪವಿತ್ರಗ್ರಂಥವನ್ನು ಓದುವುದಕ್ಕೆ ಅವರು ಎದ್ದುನಿಂತಾಗ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಾವು ಬೆಳೆದ ನಜರೇತಿಗೆ ಬಂದು, ತಮ್ಮ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಕ್ಕೆ ಹೋಗಿ ಪವಿತ್ರ ವೇದದ ಸುರುಳಿಯನ್ನು ಓದುವುದಕ್ಕಾಗಿ ಎದ್ದು ನಿಂತರು.