Luke 4:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಭಾಗವನ್ನು ಓದಿದ ನಂತರ ಯೇಸು ಆ ಪುಸ್ತಕವನ್ನು ಮುಚ್ಚಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಸಭಾಮಂದಿರದಲ್ಲಿದ್ದ ಪ್ರತಿಯೊಬ್ಬರು ಯೇಸುವನ್ನೇ ದೃಷ್ಟಿಸಿ ನೋಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಓದಿದ ಮೇಲೆ ಆತನು ಆ ಸುರುಳಿಯನ್ನು ಸುತ್ತಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಅಲ್ಲಿ ನೆರೆದ್ದಿದವರೆಲ್ಲರ ಕಣ್ಣುಗಳೂ ಆತನ ಮೇಲಿರಲಾಗಿ,
Kannada BSI Bible 2016
ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಓದಿದ ಮೇಲೆ ಆತನು ಆ ಸುರಳಿಯನ್ನು ಸುತ್ತಿ ಸಭಾಮಂದಿರದ ಆಳಿನ ಕೈಗೆ ಕೊಟ್ಟು ಕೂತುಕೊಂಡನು. ಅಲ್ಲಿದ್ದವರೆಲ್ಲರ ಕಣ್ಣುಗಳು ಆತನ ಮೇಲೆಯೇ ಬಿದ್ದಿರಲಾಗಿ
Kannada Bible (KNCL) BSI 2016
ಈ ವಾಕ್ಯವನ್ನು ಓದಿ, ಸುರುಳಿಯನ್ನು ಸುತ್ತಿ, ಪ್ರಾರ್ಥನಾಮಂದಿರದ ಸೇವಕನ ಕೈಗಿತ್ತು, ಯೇಸು ಕುಳಿತುಕೊಂಡರು. ಅಲ್ಲಿದ್ದ ಎಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಗ್ರಂಥದ ಸುರುಳಿಯನ್ನು ಸುತ್ತಿ, ಪರಿಚಾರಕನ ಕೈಗೆ ಕೊಟ್ಟು ಕುಳಿತುಕೊಂಡರು. ಆಗ ಆ ಸಭಾಮಂದಿರದಲ್ಲಿ ಇದ್ದವರೆಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು.