Luke 4:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರೆಲ್ಲರೂ ಯೇಸುವನ್ನು ಹೊಗಳತೊಡಗಿದರು. ಅವರು ಆತನ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಈ ರೀತಿ ಮಾತಾಡಲು ಹೇಗೆ ಸಾಧ್ಯ? ಇವನು ಯೋಸೇಫನ ಮಗನಲ್ಲವೇ?” ಎಂದು ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.
Kannada BSI Bible 2016
ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು ಇವನು ಯೋಸೇಫನ ಮಗನಲ್ಲವೇ ಎಂದು ಮಾತಾಡಿಕೊಂಡರು.
Kannada Bible (KNCL) BSI 2016
ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲರೂ ಅವರನ್ನು ಹೊಗಳಿದರು. ಯೇಸುವಿನ ಬಾಯಿಂದ ಬಂದ ಕೃಪೆಯುಳ್ಳ ಮಾತುಗಳಿಗೆ ಆಶ್ಚರ್ಯಪಟ್ಟು, “ಈತನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.