Luke 4:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅವರಿಗೆ, “ನೀವಂತೂ ‘ವೈದ್ಯನೇ, ನಿನ್ನನ್ನೇ ವಾಸಿಮಾಡಿಕೊ’ ಎಂಬ ಗಾದೆಯನ್ನು ನನಗೆ ಹೇಳುತ್ತೀರಿ ಎಂಬುದು ನನಗೆ ಗೊತ್ತು. ‘ನೀನು ಕಪೆರ್ನೌಮಿನಲ್ಲಿ ಮಾಡಿದ ಕೆಲವು ಕಾರ್ಯಗಳ ಬಗ್ಗೆ ನಾವು ಕೇಳಿದ್ದೇವೆ. ಅದೇ ಕಾರ್ಯಗಳನ್ನು ನಿನ್ನ ಸ್ವಂತ ಊರಿನಲ್ಲಿ ಮಾಡು!’” ಎಂದು ಹೇಳಬೇಕೆಂದಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು ಅವರಿಗೆ, “‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ’ ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೌಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ.
Kannada BSI Bible 2016
ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರಿಗೆ - ನೀವಂತೂ ವೈದ್ಯನೇ, ನಿನ್ನನ್ನೇ ವಾಸಿಮಾಡಿಕೋ ಎಂಬ ಗಾದೆಯನ್ನು ನನಗೆ ಹೇಳಿ ಕಪೆರ್ನೌವಿುನಲ್ಲಿ ಎಂಥೆಂಥ ಕಾರ್ಯಗಳು ನಡೆದವೆಂದು ನಾವು ಕೇಳಿದೆವೋ ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿ ಮಾಡು ಅನ್ನುವಿರಷ್ಟೆ.
Kannada Bible (KNCL) BSI 2016
ಅನಂತರ ಯೇಸು ಅವರಿಗೆ, “ ‘ವೈದ್ಯನೇ, ಮೊದಲು ನಿನ್ನನ್ನು ನೀನು ಗುಣಪಡಿಸಿಕೊ’, ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಅನ್ವಯಿಸುವಿರಿ; ಅಲ್ಲದೆ, ‘ಕಫೆರ್ನವುಮಿನಲ್ಲಿ ನೀನು ಎಂಥೆಂಥ ಮಹತ್ಕಾರ್ಯಗಳನ್ನು ಮಾಡಿದೆ ಎಂದು ನಾವು ಕೇಳಿದ್ದೇವೆ; ಅಂಥವುಗಳನ್ನು ಈ ನಿನ್ನ ಸ್ವಂತ ಊರಿನಲ್ಲೂ ಮಾಡು,’ ಎಂದೂ ಹೇಳುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ ‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ!’ ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಹೇಳಿ, ‘ಕಪೆರ್ನೌಮಿನಲ್ಲಿ ಎಂತೆಂಥ ಕಾರ್ಯಗಳು ನಡೆಯಿತೆಂದು ನಾವು ಕೇಳಿದೆವು. ಅದನ್ನು ಇಲ್ಲಿ ನಿನ್ನ ಸ್ವಂತ ಊರಿನಲ್ಲಿಯೂ ಮಾಡು’ ಎಂದು ನನಗೆ ಹೇಳುವಿರಿ,” ಎಂದರು.