Luke 4:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ಹೇಳುವುದು ಸತ್ಯ. ಎಲೀಯನ ಕಾಲದಲ್ಲಿ ಮೂರುವರೆ ವರ್ಷಗಳವರೆಗೆ ಇಸ್ರೇಲ್ ದೇಶದಲ್ಲಿ ಮಳೆ ಬೀಳಲಿಲ್ಲ. ದೇಶದ ಯಾವ ಕಡೆಯಲ್ಲಿಯೂ ಆಹಾರವಿರಲಿಲ್ಲ. ಆ ಸಮಯದಲ್ಲಿ ಇಸ್ರೇಲಿನಲ್ಲಿ ಅನೇಕ ವಿಧವೆಯರು ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;
Kannada BSI Bible 2016
ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರುಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲ್ ಜನರಲ್ಲಿ ಎಷ್ಟೋ ಮಂದಿ ವಿಧವೆಯರು ಇದ್ದದ್ದು ನಿಜ;
Kannada Bible (KNCL) BSI 2016
ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗೆ ಸತ್ಯವನ್ನು ಹೇಳುತ್ತೇನೆ: ಎಲೀಯನ ದಿವಸಗಳಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ, ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರು.