Luke 4:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಎಲೀಯನನ್ನು ಬೇರೆ ಯಾವ ವಿಧವೆಯರ ಬಳಿಗೂ ಕಳುಹಿಸದೆ ಸಿದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳುಹಿಸಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವರಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ, ಸೀದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಮಾತ್ರ ಅವನನ್ನು ಕಳುಹಿಸಿದನು.
Kannada BSI Bible 2016
ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್‌ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವರಲ್ಲಿ ಒಬ್ಬರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ ಸೀದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳುಹಿಸಿದನು.
Kannada Bible (KNCL) BSI 2016
ಅವರಾರ ಬಳಿಗೂ ದೇವರು ಎಲೀಯನನ್ನು ಕಳಿಸಲಿಲ್ಲ. ಸಿದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಲ್ಲಿ ಯಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಕಳುಹಿಸಿದರು.