Luke 4:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಪ್ರವಾದಿಯಾದ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರೇಲಿನಲ್ಲಿ ವಾಸಿಸುತ್ತಿದ್ದರು. ಆದರೆ ಅವರಲ್ಲಿ ಯಾರಿಗೂ ವಾಸಿಯಾಗದೆ ಸಿರಿಯ ದೇಶದ ನಾಮಾನನೊಬ್ಬನಿಗೇ ವಾಸಿಯಾಯಿತು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು” ಎಂದು ಹೇಳಿದನು.
Kannada BSI Bible 2016
ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಎಷ್ಟೋ ಮಂದಿ ಕುಷ್ಠರೋಗಿಗಳು ಇದ್ದಾಗ್ಯೂ ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸುರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು ಎಂದು ಹೇಳಿದನು.
Kannada Bible (KNCL) BSI 2016
ಅಂತೆಯೇ, ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಯೇಲ್ ನಾಡಿನಲ್ಲಿ ಅನೇಕ ಕುಷ್ಠರೋಗಿಗಳು ಇದ್ದರು. ಅವರಲ್ಲಿ ಸಿರಿಯ ದೇಶದ ನಾಮನನನ್ನು ಬಿಟ್ಟು ಮಿಕ್ಕ ಯಾರೂ ಗುಣಮುಖರಾಗಲಿಲ್ಲ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ, ಪ್ರವಾದಿ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿದ್ದರೂ ಸಿರಿಯದ ನಾಮಾನನ ಹೊರತು ಅವರಲ್ಲಿ ಬೇರೆ ಯಾರೂ ಶುದ್ಧರಾಗಲಿಲ್ಲ,” ಎಂದರು.