Luke 4:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವನ್ನು ಪಟ್ಟಣದಿಂದ ಹೊರಗಟ್ಟಿದರು. ಆ ಪಟ್ಟಣವು ಒಂದು ಗುಡ್ಡದ ಮೇಲಿತ್ತು. ಅವರು ಯೇಸುವನ್ನು ಗುಡ್ಡದ ಅಂಚಿಗೆ ಕರೆದುಕೊಂಡು ಬಂದು ಕೆಳಕ್ಕೆ ತಳ್ಳಿಬಿಡಬೇಕೆಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎದ್ದು ಆತನನ್ನು ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಅಂಚಿಗೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು.
Kannada BSI Bible 2016
ಅವರು ಮೇಲಕ್ಕೆದ್ದು ಆತನನ್ನು ಪಟ್ಟಣದ ಹೊರಗೆ ದೂಡಿ ಕೊಂಡು ಹೋಗಿ ತಲೆ ಕೆಳಗೆ ಮಾಡಿ ದೊಬ್ಬಬೇಕೆಂದು ತಮ್ಮ ಪಟ್ಟಣವು ಕಟ್ಟಲ್ಪಟ್ಟಿದ್ದ ಬೆಟ್ಟದ ಕಡಿದಾದ ಸ್ಥಳಕ್ಕೆ ಆತನನ್ನು ನಡಿಸಿಕೊಂಡು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಮ್ಮ ಊರು ಕಟ್ಟಿದ್ದ ಗುಡ್ಡದ ಕಡಿದಾದ ಸ್ಥಳಕ್ಕೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಬೇಕೆಂದಿದ್ದರು.
Kannada Bible (KNCL) BSI 2016
ಯೇಸುವನ್ನು ಆ ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರಿದ್ದ ಗುಡ್ಡದ ತುದಿಗೆ ಕೊಂಡೊಯ್ದು, ಅಲ್ಲಿಂದ ಅವರನ್ನು ಕೆಳಕ್ಕೆ ದಬ್ಬಬೇಕೆಂದಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮೇಲಕ್ಕೆದ್ದು, ಯೇಸುವನ್ನು ಪಟ್ಟಣದ ಹೊರಗೆ ದಬ್ಬಬೇಕೆಂದು, ತಮ್ಮ ಬೆಟ್ಟದ ಮೇಲೆ ಕಟ್ಟಿರುವ ಪಟ್ಟಣದ ಕಡಿದಾದ ಸ್ಥಳಕ್ಕೆ ಅವರನ್ನು ಹಿಡಿದುಕೊಂಡು ಹೋದರು.