Luke 4:34 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಜರೇತಿನ ಯೇಸುವೇ! ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡಲು ಇಲ್ಲಿಗೆ ಬಂದಿರುವೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಕಳುಹಿಸಲ್ಪಟ್ಟ ಪರಿಶುದ್ಧನು!” ಎಂದು ಕೂಗಿದನು.
Kannada BSI Bible 2016
ನಮ್ಮನ್ನು ಬಿಟ್ಟು ಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೆ ಯಾಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೆವ್ವವು - ಹಾ! ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು. ನೀನು ದೇವರು ಪ್ರತಿಷ್ಠಿಸಿದವನೇ ಎಂದು ಅಬ್ಬರಿಸಿ ಹೇಳಿತು.
Kannada Bible (KNCL) BSI 2016
ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? ನೀವು ಯಾರೆಂದು ನನಗೆ ಗೊತ್ತು; ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಗಟ್ಟಿಯಾಗಿ ಕಿರುಚಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಜರೇತಿನ ಯೇಸುವೇ, ನಮ್ಮ ಗೊಡವೆ ನಿಮಗೆ ಏಕೆ? ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರಾ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರ ಪರಿಶುದ್ಧರು,” ಎಂದು ಹೇಳಿದನು.