Luke 4:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೇಸು ಆ ದೆವ್ವಕ್ಕೆ, “ಸುಮ್ಮನಿರು! ಇವನನ್ನು ಬಿಟ್ಟು ಹೊರಗೆ ಬಾ!” ಎಂದು ಆಜ್ಞಾಪಿಸಿದನು. ದೆವ್ವವು ಅವನನ್ನು ಜನರೆಲ್ಲರ ಎದುರಿನಲ್ಲಿಯೇ ಕೆಡವಿ ಯಾವ ಕೇಡೂ ಮಾಡದೆ ಬಿಟ್ಟು ಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ದೆವ್ವವನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ಹೋಗು” ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು.
Kannada BSI Bible 2016
ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅದನ್ನು ಗದರಿಸಿ - ಸುಮ್ಮನಿರು, ಇವನನ್ನು ಬಿಟ್ಟುಹೋಗು ಎನ್ನಲಾಗಿ ಆ ದೆವ್ವವು ಅವನನ್ನು ನಡುವೆ ಕೆಡವಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು.
Kannada Bible (KNCL) BSI 2016
ಆದರೆ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ದೆವ್ವಕ್ಕೆ ಆಜ್ಞಾಪಿಸಿದರು. ಆ ದೆವ್ವ ಎಲ್ಲರ ಎದುರಿಗೇ ಅವನನ್ನು ಕೆಡವಿ, ಯಾವ ಕೆಡುಕನ್ನೂ ಮಾಡದೆ ಅವನನ್ನು ಬಿಟ್ಟು ಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಅವನೊಳಗಿಂದ ಹೊರಗೆ ಬಾ,” ಎಂದರು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ, ಬಾಧಿಸದೆ ಅವನೊಳಗಿಂದ ಹೊರಗೆ ಬಂತು.