Luke 4:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರೆಲ್ಲರೂ ಬೆರಗಾಗಿ, “ಎಂಥಾ ಮಾತುಗಳಿವು! ಆತನು ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಆಜ್ಞಾಪಿಸಲು, ಅವು ಬಿಟ್ಟುಹೋಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಎಲ್ಲರು ಬೆರಗಾಗಿ, “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Kannada BSI Bible 2016
ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಎಲ್ಲರು ಬೆರಗಾಗಿ - ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ ಬಲದಿಂದಲೂ ದೆವ್ವಗಳಿಗೆ ಅಪ್ಪಣೆ ಕೊಡುತ್ತಾನೆ, ಅವು ಬಿಟ್ಟುಹೋಗುತ್ತವೆ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.
Kannada Bible (KNCL) BSI 2016
ಜನರೆಲ್ಲರೂ ಆಶ್ಚರ್ಯಚಕಿತರಾದರು. “ಎಂಥಾ ಮಾತುಗಳಿವು! ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆಮಾಡುತ್ತಾನೆ; ಅವು ಕೂಡ ಈತ ಹೇಳಿದ ಹಾಗೆ ಕೇಳುತ್ತವಲ್ಲಾ!” ಎಂದು ತಮ್ಮತಮ್ಮೊಳಗೇ ಮಾತನಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರೆಲ್ಲರೂ ಬೆರಗಾಗಿ, “ಇದೆಂಥಾ ಮಾತಾಗಿದೆ! ಈತನು ಅಧಿಕಾರದಿಂದಲೂ ಶಕ್ತಿಯಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆಕೊಡಲು ಅವು ಹೊರಗೆ ಬರುತ್ತವಲ್ಲಾ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

Recommended Reading