Luke 4:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಸಭಾಮಂದಿರದಿಂದ ಹೊರಟು ಸೀಮೋನನ ಮನೆಗೆ ಹೋದನು. ಸೀಮೋನನ ಅತ್ತೆ ಬಹಳ ಜ್ವರದಿಂದ ನರಳುತ್ತಿದ್ದಳು. ಆಕೆಗೆ ಸಹಾಯ ಮಾಡಬೇಕೆಂದು ಅಲ್ಲಿದ್ದವರು ಆತನನ್ನು ಬೇಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ವಿಪರೀತ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯ ವಿಷಯದಲ್ಲಿ ಅಲಿದ್ದವರು ಆತನನ್ನು ಬೇಡಿಕೊಂಡರು.
Kannada BSI Bible 2016
ತರುವಾಯ ಆತನು ಸಭಾಮಂದಿರದಿಂದ ಎದ್ದು ಸೀಮೋನನ ಮನೆಯಲ್ಲಿ ಪ್ರವೇಶಿಸಿದನು; ಅಲ್ಲಿ ಸೀಮೋನನ ಹೆಂಡತಿಯ ತಾಯಿಗೆ ಕಠಿಣ ಜ್ವರವಿದ್ದದ ರಿಂದ ಅವರು ಆಕೆಗೋಸ್ಕರ ಆತನನ್ನು ಬೇಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ಕಠಿನ ಜ್ವರದಿಂದ ಬಹಳ ಕಷ್ಟಪಡುತ್ತಿರಲಾಗಿ ಆಕೆಯ ವಿಷಯದಲ್ಲಿ ಆತನನ್ನು ಬೇಡಿಕೊಂಡರು.
Kannada Bible (KNCL) BSI 2016
ಪ್ರಾರ್ಥನಾಮಂದಿರದಿಂದ ಹೊರಟ ಯೇಸುಸ್ವಾಮಿ ಸಿಮೋನನ ಮನೆಗೆ ಬಂದರು. ಆ ಸಿಮೋನನ ಅತ್ತೆ ವಿಷಮಜ್ವರದಿಂದ ನರಳುತ್ತಿದ್ದಳು. ಅಲ್ಲಿದ್ದವರು ಅವಳ ಪರವಾಗಿ ಯೇಸುವಿನಲ್ಲಿ ಮೊರೆಯಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಸಭಾಮಂದಿರದಿಂದ ಎದ್ದು ಸೀಮೋನನ ಮನೆಗೆ ಹೋದರು. ಅಲ್ಲಿ ಸೀಮೋನನ ಅತ್ತೆಗೆ ಕಠಿಣ ಜ್ವರವಿದ್ದುದರಿಂದ ಅಲ್ಲಿದ್ದವರು ಆಕೆಗೆ ಸಹಾಯ ಮಾಡಬೇಕೆಂದು ಯೇಸುವನ್ನು ಬೇಡಿಕೊಂಡರು.