Luke 4:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರುದಿನ ಯೇಸು ನಿರ್ಜನ ಸ್ಥಳಕ್ಕೆ ಹೋದನು. ಜನರು ಯೇಸುವಿಗಾಗಿ ಹುಡುಕುತ್ತಾ ಅಲ್ಲಿಗೆ ಬಂದು, ತಮ್ಮನ್ನು ಬಿಟ್ಟುಹೋಗದಂತೆ ಆತನನ್ನು ತಡೆಯಲು ಪ್ರಯತ್ನಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳಗಾದ ಮೇಲೆ ಆತನು ಹೊರಟು ನಿರ್ಜನವಾದ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು, ಆತನು ಅವರನ್ನು ಬಿಟ್ಟುಹೋಗಬಾರದೆಂದು ಅವರು ಆತನನ್ನು ತಡೆದರು.
Kannada BSI Bible 2016
ಬೆಳಗಾದ ಮೇಲೆ ಆತನು ಅರಣ್ಯ ಸ್ಥಳಕ್ಕೆ ಹೊರಟು ಹೋದನು; ಜನರು ಆತನನ್ನು ಹುಡುಕಿಕೊಂಡು ಆತನ ಬಳಿಗೆ ಬಂದು ತಮ್ಮನ್ನು ಬಿಟ್ಟು ಹೋಗ ಬಾರದೆಂದು ಆತನನ್ನು ತಡೆದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳಗಾದ ಮೇಲೆ ಆತನು ಹೊರಟು ಅಡವಿಯ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು - ನೀನು ನಮ್ಮನ್ನು ಬಿಟ್ಟುಹೋಗಬೇಡ ಎಂದು ಆತನನ್ನು ತಡೆದರು.
Kannada Bible (KNCL) BSI 2016
ಬೆಳಗಾಗುತ್ತಲೇ, ಯೇಸುಸ್ವಾಮಿ ಅಲ್ಲಿಂದ ಹೊರಟು ನಿರ್ಜನ ಸ್ಥಳಕ್ಕೆ ಹೋದರು. ಜನಸಮೂಹವು ಅವರನ್ನು ಹುಡುಕಿಕೊಂಡು ಅಲ್ಲಿಗೂ ಬಂದಿತು; ತಮ್ಮನ್ನು ಬಿಟ್ಟುಹೋಗಬಾರದೆಂದು ಜನರು ತಡೆಗಟ್ಟಲು ಯತ್ನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳಗಾದ ಮೇಲೆ, ಯೇಸು ಏಕಾಂತ ಸ್ಥಳಕ್ಕೆ ಹೊರಟು ಹೋದರು. ಜನರು ಅವರನ್ನು ಹುಡುಕಿಕೊಂಡು ಅವರ ಬಳಿಗೆ ಬಂದು ತಮ್ಮನ್ನು ಬಿಟ್ಟು ಹೋಗಬಾರದೆಂದು ಅವರನ್ನು ತಡೆದರು.