Luke 4:43 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೇಸು ಅವರಿಗೆ, “ನಾನು ಬೇರೆ ಊರುಗಳವರಿಗೂ ಸಹ ದೇವರ ರಾಜ್ಯದ ಸುವಾರ್ತೆಯನ್ನು ತಿಳಿಸಬೇಕು. ಇದಕ್ಕಾಗಿಯೇ ನನ್ನನ್ನು ಕಳುಹಿಸಲಾಗಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆತನು ಅವರಿಗೆ, “ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು.
Kannada BSI Bible 2016
ಆದರೆ ಆತನು ಅವರಿಗೆ--ಬೇರೆ ಪಟ್ಟಣಗಳಿಗೂ ದೇವರ ರಾಜ್ಯವನ್ನು ನಾನು ಸಾರಲೇಬೇಕು; ಇದಕ್ಕಾಗಿಯೇ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆತನು ಅವರಿಗೆ - ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ ಎಂದು ಹೇಳಿದನು.
Kannada Bible (KNCL) BSI 2016
ಅವರಿಗೆ ಯೇಸು, “ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಬೇರೆ ಬೇರೆ ಊರುಗಳಿಗೂ ನಾನು ಬೋಧಿಸಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಅದಕ್ಕಾಗಿಯೇ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಸು ಅವರಿಗೆ, “ಬೇರೆ ಪಟ್ಟಣಗಳಿಗೂ ದೇವರ ರಾಜ್ಯದ ಸುವಾರ್ತೆಯನ್ನು ನಾನು ಸಾರಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಇದಕ್ಕಾಗಿಯೇ,” ಎಂದರು.