Luke 4:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಯೇಸು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು, “‘ನಿನ್ನ ದೇವರಾಗಿರುವ ಕರ್ತನನ್ನು ಆರಾಧಿಸಿ, ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದದೆ” ಎಂದು ಉತ್ತರಕೊಟ್ಟನು.
Kannada BSI Bible 2016
ಯೇಸು ಅವನಿಗೆ ಪ್ರತ್ಯುತ್ತರವಾಗಿ--ಸೈತಾನನೇ, ನನ್ನ ಹಿಂದೆ ಹೋಗು; ಯಾಕಂದರೆ--ನೀನು ನಿನ್ನ ದೇವರಾದ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸತಕ್ಕದ್ದು ಎಂದು ಬರೆದದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು; ಅವರೊಬ್ಬರಿಗೇ ಸೇವೆ ಸಲ್ಲಿಸು,’ ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ ಉತ್ತರವಾಗಿ, “ ‘ನಿನ್ನ ದೇವರಾದ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.