Luke 5:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಗೆನೆಸರೇತ್ (ಗಲಿಲಾಯ) ಸರೋವರದ ಬಳಿ ನಿಂತುಕೊಂಡಿದ್ದಾಗ, ದೇವರ ವಾಕ್ಯವನ್ನು ಕೇಳಲು ಅನೇಕ ಜನರು ನೂಕಾಡುತ್ತಾ ಆತನ ಸುತ್ತಲೂ ಸೇರಿಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.
Kannada BSI Bible 2016
ಇದಾದ ಮೇಲೆ ಆತನು ಗೆನೇಜರೆತ್‌ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದಾನೊಂದು ದಿವಸ ಜನರು ಒತ್ತಾಗಿ ಬಂದು ಆತನ ಮೇಲೆ ಬಿದ್ದುಕೊಂಡು ದೇವರ ವಾಕ್ಯವನ್ನು ಕೇಳುತ್ತಿರಲು
Kannada Bible (KNCL) BSI 2016
ಒಮ್ಮೆ ಯೇಸುಸ್ವಾಮಿ ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ದಿನ ಯೇಸು ಗೆನೆಜರೇತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ, ಜನರು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಅವರ ಸುತ್ತಲೂ ಗುಂಪಾಗಿ ಕೂಡಿದ್ದರು.