Luke 5:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಆಶ್ಚರ್ಯಪಟ್ಟರು. (ಇವರಿಬ್ಬರೂ ಸೀಮೋನನ ಪಾಲುಗಾರರಾಗಿದ್ದರು.) ಯೇಸು ಸೀಮೋನನಿಗೆ, “ಭಯಪಡಬೇಡ. ಇಂದಿನಿಂದ ನೀನು ಮೀನನ್ನು ಹಿಡಿಯದೆ, ಮನುಷ್ಯರನ್ನು ಒಟ್ಟುಗೂಡಿಸಲು ದುಡಿಯುವೆ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೀಮೋನನ ಸಂಗಡಿಗರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಹಾಗೆಯೇ ಆಶ್ಚರ್ಯಪಟ್ಟರು. ಯೇಸು ಸೀಮೋನನಿಗೆ, “ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವ ಬೆಸ್ತನಾಗಿರುವಿ” ಎಂದು ಹೇಳಿದನು.
Kannada BSI Bible 2016
ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೀಮೋನನ ಪಾಲುಗಾರರಾಗಿದ್ದಂಥ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯಪಟ್ಟರು. ಯೇಸು ಸೀಮೋನನಿಗೆ - ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವವನಾಗಿರುವಿ ಎಂದು ಹೇಳಿದನು.
Kannada Bible (KNCL) BSI 2016
ಸಿಮೋನನ ಪಾಲುಗಾರರಾದ ಜೆಬೆದಾಯನ ಮಕ್ಕಳು - ಯಕೋಬ ಮತ್ತು ಯೊವಾನ್ನರು - ಹಾಗೆಯೇ ಬೆರಗಾಗಿದ್ದರು. ಆಗ ಯೇಸು ಸಿಮೋನನಿಗೆ, “ಹೆದರಬೇಡ, ಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ, ಯೋಹಾನರೂ ಹಾಗೆಯೇ ವಿಸ್ಮಯಗೊಂಡಿದ್ದರು. ಆಗ ಯೇಸು ಸೀಮೋನನಿಗೆ, “ಹೆದರಬೇಡ; ಇಂದಿನಿಂದ ನೀನು ದೇವರಿಗಾಗಿ ಮನುಷ್ಯರನ್ನೇ ಹಿಡಿಯುವವನಾಗಿರುವೆ, ” ಎಂದರು.