Luke 5:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಮ್ಮೆ ಯೇಸು ಒಂದು ಊರಿನಲ್ಲಿದ್ದಾಗ ಕುಷ್ಠರೋಗಿಯೊಬ್ಬನು ಆತನನ್ನು ಕಂಡು, ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನೀನು ಮನಸ್ಸು ಮಾಡಿದರೆ ನನ್ನನ್ನು ಗುಣಪಡಿಸಬಲ್ಲೆ ಎಂದು ನನಗೆ ಗೊತ್ತಿದೆ” ಎಂದು ಬೇಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಸಾಷ್ಟಾಂಗವೆರಗಿ, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.
Kannada BSI Bible 2016
ತರುವಾಯ ಆತನು ಒಂದಾನೊಂದು ಪಟ್ಟಣ ದಲ್ಲಿದ್ದಾಗ ಇಗೋ, ತುಂಬಾ ಕುಷ್ಠವಿದ್ದ ಒಬ್ಬ ಮನುಷ್ಯನು ಯೇಸುವನ್ನು ನೋಡಿ ಬೋರಲ ಬಿದ್ದು ಆತನಿಗೆ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಆತನನ್ನು ಬೇಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಅಡ್ಡ ಬಿದ್ದು - ಸ್ವಾಮೀ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಎಂದು ಬೇಡಿಕೊಂಡನು.
Kannada Bible (KNCL) BSI 2016
ಯೇಸುಸ್ವಾಮಿ ಒಂದು ಪಟ್ಟಣದಲ್ಲಿ ಇದ್ದಾಗ, ಮೈಯೆಲ್ಲಾ ಕುಷ್ಠ ಹಿಡಿದಿದ್ದ ರೋಗಿ ಒಬ್ಬನು ಅಲ್ಲಿಗೆ ಬಂದು ಅವರಿಗೆ ಅಡ್ಡಬಿದ್ದು, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಒಂದು ಪಟ್ಟಣದಲ್ಲಿದ್ದಾಗ, ಮೈಯೆಲ್ಲಾ ಕುಷ್ಠರೋಗವಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಅಡ್ಡಬಿದ್ದು ಅವರಿಗೆ, “ಸ್ವಾಮಿ, ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು.