Luke 5:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅವನಿಗೆ, “ನಿನಗೆ ಹೇಗೆ ಗುಣವಾಯಿತು ಎಂಬುದರ ಬಗ್ಗೆ ಯಾರಿಗೂ ಹೇಳದೆ ಯಾಜಕನ ಬಳಿಗೆ ಹೋಗಿ ನಿನ್ನ ಮೈಯನ್ನು ತೋರಿಸಿ ಮೋಶೆಯ ನಿಯಮಗಳಿಗನುಸಾರವಾಗಿ ಕಾಣಿಕೆಯನ್ನು ದೇವರಿಗೆ ಸಮರ್ಪಿಸು. ನಿನಗೆ ವಾಸಿಯಾಯಿತೆಂಬುದಕ್ಕೆ ಇದೇ ಜನರಿಗೆಲ್ಲಾ ಸಾಕ್ಷಿಯಾಗಿರುವುದು” ಎಂದು ಹೇಳಿದನು. ಆದರೆ ಯೇಸುವಿನ ಸುದ್ದಿಯು ಹೆಚ್ಚೆಚ್ಚಾಗಿ ಹಬ್ಬಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನು ಅವನಿಗೆ, “ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ” ಎಂದು ಅಪ್ಪಣೆಕೊಟ್ಟನು.
Kannada BSI Bible 2016
ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು ಅವನಿಗೆ - ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ನೇಮಕ ಮಾಡಿರುವದನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ ಎಂದು ಅಪ್ಪಣೆಕೊಟ್ಟನು.
Kannada Bible (KNCL) BSI 2016
ಇದನ್ನು ಯಾರಿಗೂ ಹೇಳಕೂಡದು ಎಂದು ಯೇಸು ಅವನನ್ನು ಎಚ್ಚರಿಸಿ, “ನೀನು ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ; ನಂತರ ಮೋಶೆ ನಿಯಮಿಸಿರುವ ಪ್ರಕಾರ ನೀನು ಗುಣಹೊಂದಿದ್ದಕ್ಕಾಗಿ ಶುದ್ಧೀಕರಣ ವಿಧಿಯನ್ನು ಅನುಸರಿಸು; ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಅವನಿಗೆ, “ಇದನ್ನು ನೀನು ಯಾರಿಗೂ ಹೇಳಬೇಡ, ಆದರೆ ನೀನು ಗುಣಹೊಂದಿದ್ದಕ್ಕೆ ಜನರಿಗೆ ಸಾಕ್ಷಿಯಾಗಿರುವಂತೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆ ಅಪ್ಪಣೆ ಕೊಟ್ಟಂತೆ ಅರ್ಪಿಸು,” ಎಂದು ಆಜ್ಞಾಪಿಸಿದರು.