Luke 5:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನೇಕ ಜನರು ಆತನ ಬೋಧನೆಗಳನ್ನು ಕೇಳುವುದಕ್ಕೂ ತಮ್ಮ ಕಾಯಿಲೆಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು, ಮತ್ತು ಜನರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ, ತಮ್ಮ ತಮ್ಮ ರೋಗರುಜಿನಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ, ಗುಂಪುಗುಂಪಾಗಿ ಬಂದು ಸೇರಿದರು.
Kannada BSI Bible 2016
ಆದರೂ ಆತನ ಕೀರ್ತಿಯು ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು; ದೊಡ್ಡ ಸಮೂಹಗಳು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ಆತನಿಂದ ವಾಸಿಮಾಡಿಸಿಕೊಳ್ಳು ವದಕ್ಕೂ ಕೂಡಿ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು; ಮತ್ತು ಜನರು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮತಮ್ಮ ಜಾಡ್ಯಗಳನ್ನು ವಾಸಿ ಮಾಡಿಸಿಕೊಳ್ಳುವದಕ್ಕೂ ಗುಂಪುಗುಂಪಾಗಿ ನೆರೆದರು.
Kannada Bible (KNCL) BSI 2016
ಯೇಸು ಎಷ್ಟು ಎಚ್ಚರಿಸಿದರೋ ಅಷ್ಟೂ ಅಧಿಕವಾಗಿ ಅವರ ಸುದ್ದಿ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ತಂಡೋಪತಂಡವಾಗಿ ಬರುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಯೇಸುವಿನ ವಿಷಯವು, ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ಅವರಿಂದ ವಾಸಿಮಾಡಿಸಿಕೊಳ್ಳುವುದಕ್ಕೂ ದೊಡ್ಡ ಸಮೂಹಗಳು ಕೂಡಿ ಬಂದವು.