Luke 5:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದು ದಿನ ಯೇಸು ಜನರಿಗೆ ಬೋಧಿಸುತ್ತಿದ್ದನು. ಫರಿಸಾಯರು ಮತ್ತು ಧರ್ಮೋಪದೇಶಕರು ಸಹ ಅಲ್ಲಿ ಕುಳಿತುಕೊಂಡಿದ್ದರು. ಅವರು, ಗಲಿಲಾಯದಿಂದಲೂ ಜುದೇಯ ಪ್ರಾಂತ್ಯದ ಊರುಗಳಿಂದಲೂ ಜೆರುಸಲೇಮಿನಿಂದಲೂ ಬಂದಿದ್ದರು. ರೋಗಿಗಳನ್ನು ಗುಣಪಡಿಸಲು ಪ್ರಭುವಿನ ಶಕ್ತಿಯು ಆತನಲ್ಲಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು.
Kannada BSI Bible 2016
ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದಾನೊಂದು ದಿನದಲ್ಲಿ ಆತನು ಉಪದೇಶ ಮಾಡುತ್ತಿರಲು ಗಲಿಲಾಯ ಯೂದಾಯಗಳ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇವಿುನಿಂದಲೂ ಬಂದಿದ್ದ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಆತನ ಹತ್ತಿರ ಕೂತುಕೊಂಡಿದ್ದರು. ಗುಣಮಾಡುವದಕ್ಕೆ ಕರ್ತನ ಶಕ್ತಿಯು ಆತನಲ್ಲಿತ್ತು.
Kannada Bible (KNCL) BSI 2016
ಒಮ್ಮೆ ಯೇಸುಸ್ವಾಮಿ ಬೋಧನೆಮಾಡುತ್ತಾ ಇದ್ದಾಗ, ಫರಿಸಾಯರೂ ಧರ್ಮಶಾಸ್ತ್ರಜ್ಞರೂ ಅವರ ಹತ್ತಿರ ಕುಳಿತಿದ್ದರು. ಇವರು ಗಲಿಲೇಯ ಹಾಗೂ ಜುದೇಯ ಪ್ರಾಂತ್ಯದ ಊರೂರುಗಳಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಬಂದಿದ್ದರು. ಗುಣಪಡಿಸುವಂತಹ ದೈವಶಕ್ತಿ ಯೇಸುವಿನಲ್ಲಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ದಿನ ಯೇಸು ಬೋಧಿಸುತ್ತಿದ್ದಾಗ, ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನಿಯಮ ಬೋಧಕರೂ ಅಲ್ಲಿ ಕುಳಿತುಕೊಂಡಿದ್ದರು. ಯೇಸುವಿನಲ್ಲಿ ಸ್ವಸ್ಥಮಾಡುವುದಕ್ಕಾಗಿ ದೇವರ ಶಕ್ತಿಯು ಇತ್ತು.