Luke 5:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬ ಪಾರ್ಶ್ವವಾಯು ರೋಗಿ ಅಲ್ಲಿದ್ದನು. ಒಂದು ಚಿಕ್ಕ ಹಾಸಿಗೆಯಲ್ಲಿ ಅವನನ್ನು ಕೆಲವು ಮಂದಿ ಗಂಡಸರು ಹೊತ್ತುಕೊಂಡು ಬಂದು ಯೇಸುವಿನ ಮುಂದೆ ಇಡಲು ಪ್ರಯತ್ನಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯು ರೋಗಿಯನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು. ಅವನನ್ನು ಒಳಗೆ ತೆಗೆದುಕೊಂಡು ಹೋಗಿ ಆತನ ಮುಂದೆ ಇರಿಸಬೇಕೆಂದು ಪ್ರಯತ್ನಿಸಿದರು.
Kannada BSI Bible 2016
ಆಗ ಇಗೋ, ಪಾರ್ಶ್ವವಾಯು ರೋಗವಿದ್ದ ಒಬ್ಬ ಮನುಷ್ಯನನ್ನು ಕೆಲವರು ಹಾಸಿಗೆಯಲ್ಲಿ ಹೊತ್ತು ಕೊಂಡು ಬಂದು ಅವನನ್ನು ಒಳಗೆ ಆತನ ಎದುರಿಗೆ ತರುವ ವಿಧಾನವನ್ನು ಹುಡುಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯು ರೋಗದವನನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು; ಆದರೆ ಅವನನ್ನು ಒಳಗೆ ತೆಗೆದುಕೊಂಡುಹೋಗಿ ಆತನ ಮುಂದೆ ಇಡಬೇಕೆಂದು ಪ್ರಯತ್ನಿಸಿದರೂ
Kannada Bible (KNCL) BSI 2016
ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅಲ್ಲಿಗೆ ಬಂದರು. ರೋಗಿಯನ್ನು ಒಳಕ್ಕೆ ತೆಗೆದುಕೊಂಡು ಹೋಗಿ ಯೇಸುವಿನ ಮುಂದೆಯೇ ಇಡಬೇಕೆಂದು ಪ್ರಯತ್ನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯಲ್ಲಿ ಹೊತ್ತುಕೊಂಡು ಬಂದು, ಒಳಗೆ ಯೇಸುವಿನ ಎದುರಿಗೆ ತರುವುದಕ್ಕೆ ಪ್ರಯತ್ನಿಸುತ್ತಿದ್ದರು.