Luke 5:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಅಲ್ಲಿ ಬಹಳ ಜನ ಇದ್ದುದರಿಂದ ಯೇಸುವಿನ ಬಳಿಗೆ ಹೋಗಲು ಅವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಅವರು ಮನೆಯ ಮೇಲೆ ಹತ್ತಿ ಹೆಂಚುಗಳನ್ನು ತೆಗೆದು ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರ ಗುಂಪು ದಟ್ಟವಾಗಿದ್ದ ಕಾರಣ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತವಾಗಿ ಜನರ ನಡುವೆ ಯೇಸುವಿನ ಮುಂದೆ ಇಳಿಸಿದರು.
Kannada BSI Bible 2016
ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ ಮನೆಯಮೇಲೆ ಹೋಗಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ನಡುವೆ ಯೇಸುವಿನ ಮುಂದೆ ಇಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ಗುಂಪಾಗಿದ್ದದರಿಂದ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತ ನಡುವೆ ಯೇಸುವಿನ ಮುಂದೆ ಇಳಿಯಬಿಟ್ಟರು.
Kannada Bible (KNCL) BSI 2016
ಆದರೆ ಜನಸಂದಣಿಯ ನಿಮಿತ್ತ ದಾರಿಮಾಡಲಾಗಲಿಲ್ಲ. ಆಗ ಅವರು ಮನೆಯ ಮೇಲೆ ಹತ್ತಿ, ಹೆಂಚುಗಳನ್ನು ತೆಗೆದು, ಅಲ್ಲಿಂದ ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ, ಮನೆಯ ಮೇಲೆ ಹೋಗಿ ಹೆಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ಯೇಸುವಿನ ಮುಂದೆ ಇಳಿಸಿದರು.