Luke 5:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸರೋವರದ ದಡದಲ್ಲಿ ನಿಂತಿದ್ದ ಎರಡು ದೋಣಿಗಳನ್ನು ಯೇಸು ನೋಡಿದನು. ಬೆಸ್ತರು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಆ ಸರೋವರದ ದಡದಲ್ಲಿದ್ದ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
Kannada BSI Bible 2016
ಆಗ ಆತನು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡನು; ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೆನೇಜರೆತ್ ಕೆರೆಯ ಅಂಚಿನಲ್ಲಿ ನಿಂತಿದ್ದ ಆತನು ಆ ಕೆರೆಯ ದಡದಲ್ಲಿ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
Kannada Bible (KNCL) BSI 2016
ಆಗ ದಡದ ಮೇಲಿದ್ದ ಎರಡು ದೋಣಿಗಳು ಯೇಸುವಿನ ಕಣ್ಣಿಗೆ ಬಿದ್ದವು. ಬೆಸ್ತರು ದೋಣಿಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡರು. ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.