Luke 5:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯ ಧರ್ಮೋಪದೇಶಕರು ಮತ್ತು ಫರಿಸಾಯರು, “ಈ ಮನುಷ್ಯನು (ಯೇಸು) ಯಾರು? ಈತನು ದೇವರಿಗೆ ವಿರುದ್ಧವಾದ ಸಂಗತಿಗಳನ್ನು ಹೇಳುತ್ತಾನಲ್ಲಾ! ದೇವರೊಬ್ಬನೇ ಪಾಪಗಳನ್ನು ಕ್ಷಮಿಸಬಲ್ಲನು” ಎಂದು ತಮ್ಮತಮ್ಮೊಳಗೆ ಯೋಚಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು.
Kannada BSI Bible 2016
ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಆ ಶಾಸ್ತ್ರಿಗಳೂ ಫರಿಸಾಯರೂ - ದೇವದೂಷಣೆಯ ಮಾತನ್ನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷವಿುಸಿಬಿಡುವದು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು ಎಂದು ಅಂದುಕೊಳ್ಳುತ್ತಿದ್ದರು.
Kannada Bible (KNCL) BSI 2016
ಇದನ್ನು ಕೇಳಿದ ಧರ್ಮಶಾಸ್ತ್ರಿಗಳೂ ಫರಿಸಾಯರೂ, “ದೇವದೂಷಣೆ ಆಡುತ್ತಿರುವ ಇವನಾರು? ದೇವರೊಬ್ಬರನ್ನು ಬಿಟ್ಟರೆ ಪಾಪಗಳನ್ನು ಕ್ಷಮಿಸಿ ಪರಿಹರಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮಲ್ಲೇ ಹೇಳಿಕೊಳ್ಳಲು ಆರಂಭಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಫರಿಸಾಯರೂ ನಿಯಮ ಬೋಧಕರೂ, “ದೇವದೂಷಣೆಯನ್ನು ಮಾಡುವುದಕ್ಕೆ ಈತನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?” ಎಂದು ತಮ್ಮಲ್ಲಿ ಮಾತನಾಡಲಾರಂಭಿಸಿದರು.