Luke 5:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರೆಲ್ಲರೂ ಬಹಳ ಆಶ್ಚರ್ಯಪಟ್ಟು ದೇವರನ್ನು ಸ್ತುತಿಸತೊಡಗಿದರು ಮತ್ತು ದೇವರಲ್ಲಿ ಭಯಭಕ್ತಿಯುಳ್ಳವರಾಗಿ, “ಈ ದಿನ ನಾವು ಆಶ್ಚರ್ಯಕರವಾದ ಸಂಗತಿಯನ್ನು ಕಂಡೆವು!” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, “ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು” ಅಂದರು.
Kannada BSI Bible 2016
ಅಲ್ಲಿದ್ದವ ರೆಲ್ಲರೂ ವಿಸ್ಮಯಗೊಂಡು ದೇವರನ್ನು ಮಹಿಮೆ ಪಡಿಸಿದರು. ಮತ್ತು ಅವರು ಭಯದಿಂದ ಕೂಡಿದ ವರಾಗಿ--ನಾವು ಈ ದಿನ ಅಪೂರ್ವವಾದವುಗಳನ್ನು ನೋಡಿದ್ದೇವೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡಿದವರೆಲ್ಲರು ಬೆರಗಾಗಿ ದೇವರನ್ನು ಕೊಂಡಾಡಿದರು; ಮತ್ತು ಅವರು ಭಯದಿಂದ ತುಂಬಿದವರಾಗಿ - ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು ಅಂದರು.
Kannada Bible (KNCL) BSI 2016
ಎಲ್ಲರೂ ನಿಬ್ಬೆರಗಾಗಿ, ‘ನಾವು ಈ ದಿನ ಎಂಥ ಅಪೂರ್ವ ಕಾರ್ಯವನ್ನು ಕಂಡೆವು!’ ಎಂದು ಭಯಭಕ್ತಿಯಿಂದ ದೇವರನ್ನು ಕೊಂಡಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿದ್ದವರೆಲ್ಲರೂ ವಿಸ್ಮಯಗೊಂಡು ದೇವರನ್ನು ಸ್ತುತಿಸಿದರು. ಅವರು ಭಯಭಕ್ತಿಯಿಂದ ಕೂಡಿದವರಾಗಿ, “ನಾವು ಈ ದಿನ ಅಪೂರ್ವವಾದ ಕಾರ್ಯಗಳನ್ನು ಕಂಡೆವು,” ಎಂದರು.